ಹಿರಿಯಡ್ಕ ಅಪ್ರಾಪ್ತೆ ಬಾಲಕಿ ಅಪಹರಣ ➤ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಹಿರಿಯಡ್ಕ  . 31: ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿ ನಡೆದಿದೆ.

 

ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕನೊಬ್ಬ ಅಪಹರಣ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಘಟನೆ ನಡೆದು ಮೂರು ದಿನ ಕಳೆದರೂ ಪತ್ತೆಯಾಗದೆ ಇರುವುದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೀದಿಗಿಳಿದಿದೆ. ಹಿರಿಯಡ್ಕ ಪೊಲೀಸ್ ಠಾಣೆ ಮುಂಭಾಗ ಮುನ್ನೂರಕ್ಕೂ ಹೆಚ್ಚು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಜಮಾಯಿಸಿದ್ದರು. ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಣ ಮಾಡಿದ್ದಾನೆ. ಇದೊಂದು ಲವ್ ಜಿಹಾದ್ ಎಂದು ಸಂಘಟನೆಯ ಪ್ರಮುಖರು ಆಪಾದಿಸಿದ್ದಾರೆ.ಆರೋಪಿ ಬಂಧನ ಶೀಘ್ರ ಆಗದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

Also Read  ಈಜು ಬಾರದೆ ಮೂವರು ಯುವಕರು ನೀರುಪಾಲು

 

error: Content is protected !!
Scroll to Top