ಉಳ್ಳಾಲ : ನಾಪತ್ತೆಯಾದ ವ್ಯಕ್ತಿಯ ಮೃತದೇಹ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ.!

(ನ್ಯೂಸ್ ಕಡಬ) newskadaba.com ಉಳ್ಳಾಲ. 01: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದ ಮನೆಯಿಂದ ನಾಪತ್ತೆಯಾಗಿದ್ದ ಹಿರಿಯ ವ್ಯಕ್ತಿಯೊಬ್ಬರ ಮೃತದೇಹ ಕೊಲೆಗೈದು ಇರಾ ಸಮೀಪದ ಗುಡ್ಡವೊಂದರಲ್ಲಿ‌ ಹೂತು ಹಾಕಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

 

ಮಲಾರ್ ಅರಸ್ತಾನದ ಪಲ್ಲಿಯಬ್ಬ ಯಾನೆ‌ ಪಲ್ಲಿಯಾಕ (70) ಕೊಲೆಯಾದವರು. ಗಾಂಜಾ ವ್ಯಸನಿಗಳ‌ ತಂಡವೊಂದು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹಲವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ಮೇಲ್ನೊಟಕ್ಕೆ ತಿಳಿದು ಬಂದಿದ್ದು, ನಿಖರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ

 

error: Content is protected !!
Scroll to Top