ಬಿಳಿನೆಲೆ :ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಬಿಳಿನೆಲೆ ನ. 01: ನಾಡಿನಾದ್ಯಂತ ಇಂದು ಕನ್ನಡ ರಾಜ್ಯೋತ್ಸದ ಸಂಭ್ರಮ . ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ 65ನೇ ಕನ್ನಡ ರಾಜ್ಯೋತ್ಸವನ್ನು ವೇದವ್ಯಾಸ ವಿದ್ಯಾಲಯದ ಸಹಯೋಗದೊಂದಿಗೆ ಸರಳವಾಗಿ ಆಚರಿಸಲಾಯಿತು.

ಶಾಲಾ ಮುಖ್ಯಗುರುಗಳಾದ ಹಿರಿಯಣ್ಣ ಗೌಡ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಅಧ್ಯಾಪಕರಾದ ಗಣಪತಿ ಭಟ್, ಶಿವರಾಮ್ ಏನೆಕಲ್, ಸತ್ಯ ಶಂಕರಭಟ್, ದಿನೇಶ್ ಕುಂದರ್, ಚೇತನ್ ಹೆಚ್ ಡಿ, ವೇದವ್ಯಾಸ ವಿದ್ಯಾಲಯದ ಮುಖ್ಯಗುರುಗಳಾದ ಪ್ರಶಾಂತ್ ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.

Also Read  '170-180 ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಸಂಜೆ ಬಿಡುಗಡೆ' ➤ ಬಿಎಸ್ ಯಡಿಯೂರಪ್ಪ

 

 

error: Content is protected !!
Scroll to Top