ಸಾರ್ವಜನಿಕವಾಗಿ ಸಂಪ್ಯ ಠಾಣಾ ಪೊಲೀಸರ ಅವಹೇಳನ ► ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.29. ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಪ್ರತಿಭಟನಾ ಸಭೆಯೊಂದರಲ್ಲಿ ಕೋಮು ಪ್ರಚೋದನಕಾರಿಯಾಗಿ ಹಾಗೂ ಗ್ರಾಮಾಂತರ ಠಾಣೆಯ ಪೊಲೀಸರನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಕಾರಂತ್ ರನ್ನು ಶುಕ್ರವಾರದಂದು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಪುತ್ತೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಕಾರಂತ್, ಗ್ರಾಮಾಂತರ ಠಾಣಾ ಎಸ್ಸೈ ಅಬ್ದುಲ್ ಖಾದರ್, ಎಎಸ್ಸೈ ರುಕ್ಮಾ ಹಾಗೂ ಚಂದ್ರ ಎನ್ನುವವರು ಹಿಂದೂ ನಾಯಕರನ್ನು ದಮನಿಸುವ ಕೃತ್ಯವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರನ್ನು ಸಾರ್ವಜನಿಕವಾಗಿ ಅವಹೇಳನ ನಡೆಸಿದ್ದರು. ಪೊಲೀಸರ ಕೃತ್ಯ ಇದೇ ರೀತಿ ಮುಂದುವರಿದಲ್ಲಿ ಪುತ್ತೂರನ್ನು ಹಳೆಯ ಸುರತ್ಕಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಜಗದೀಶ್ ಕಾರಂತ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗಿತ್ತು.

error: Content is protected !!
Scroll to Top