ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 01. ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆಸಿದ ಕನ್ನಡ ರಾಜ್ಯೋತ್ಸವ 2020  ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರುರವರು ಭಾಗವಹಿಸಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದರು.

ಇದರ ಜೊತೆಗೆ ಈ ಸಾಲಿನ ಎಸ್.ಎಸ್.ಎಲ್.ಸಿ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತರಾದ ಶ್ರೀ ಯತೀಶ್ ಉಳ್ಳಾಲ್, ತಹಶೀಲ್ದಾರ್  ಶ್ರೀ ರಮೇಶ್ ಬಾಬು, ಎ.ಎಸ್ಪಿ ಶ್ರೀ ಲಖನ್ ಸಿಂಗ್ ಯಾದವ್, ಪೌರಾಯುಕ್ತರಾದ ಶ್ರೀಮತಿ ರೂಪಾ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಶ್ರೀ ನವೀನ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಲೋಕೇಶ್ ಹಾಗೂ ಅಧಿಕಾರಿ ವರ್ಗದವರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Also Read  ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ SSLC ವಿದ್ಯಾರ್ಥಿಗಳಿಗೆ ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರ

error: Content is protected !!
Scroll to Top