(ನ್ಯೂಸ್ ಕಡಬ) newskadaba.com ಸುಳ್ಯ, ನ. 01. ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ 65 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು. ಸುಳ್ಯ ತಹಶೀಲ ದಾರ್ ಅನಂತ ಶಂಕರ್ ಬಿ. ಧ್ವಜಾರೋಹಣ ಮಾಡಿದರು. ಶಾಸಕ ಎಸ್. ಅಂಗಾರ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮಿ ನಾರಾಯಣ ಕಜೆಗದ್ದೆ, ಎ. ಪಿ. ಎಂ.ಸಿ ಅಧ್ಯಕ್ಷ ವಿನಯ ಮುಳುಗಾಡು, ಸುಳ್ಯ ತಾಲೂಕು ಕ.ಸಾ.ಪ. ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ತಾಲೂಕು ಪಂಚಾಯತ್ ಕಾರ್ಐ ನಿರ್ವಹಣಾಧಿಕಾರಿ ಭವಾನಿಶಂಕರ, ಸ.ಪ.ಪೂ.ಕಾಲೇಜು ಪ್ರಾಂಶುಪಾಲ ಮೋಹನ್ ಗೌಡ, ಸಮಾಜ ಕಲ್ಯಾಣಧಿಕಾರಿ ಚಂದ್ರಶೇಖರ ಪೇರಾಲು ಉಪಸ್ಥಿತರಿದ್ದರು. ಇಬ್ಬರಿಗೆ ರಾಜ್ಯೋತ್ಸವ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸುಳ್ಯ ಅಜ್ಜಾವರ ಚೈತನ್ಯಶ್ರಾಮದ ಯೊಗೇಶ್ವರನಂದ ಸರಸ್ವತಿ ಸ್ವಾಮೀಜಿ ಮತ್ತು ಯಕ್ಷಗಾನ ಕಲಾವಿದೆ ಭವ್ಯ ಮಂಡೆಕೋಲುರವರಿಗೆ ಸುಳ್ಯ ತಾಲೂಕು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್.ಎಲ್.ಸಿ ಕನ್ನಡ ಮಾಧ್ಯಮದಲ್ಲಿ ಕಲಿತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಕೊಡುಗೆಯಾಗಿ ನೀಡಿದರು. ಕಾರ್ಯಕ್ರಮ ಸಿಇಒ ಭವಾನಿ ಶಂಕರ್ ಸ್ವಾಗತಿಸಿ, ಸಂಪನ್ಮೂಲ ಸಮನ್ವಯಾಧಿಕಾರಿ ವೀಣಾ ಎಂ.ಟಿ. ವಂದಿಸಿದ್ದರು. ಅಚ್ಚುತ್ತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು.