(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.29. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ಸೈಡ್ ಕೊಡುವ ವಿಚಾರದಲ್ಲಿ ಗುಂಪೊಂದು ಲಾರಿ ಚಾಲಕನಿಗೆ ಹಲ್ಲೆಗೆ ಯತ್ನಿಸಿದ್ದು, ಉಪ್ಪಿನಂಗಡಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ರಸ್ತೆ ಬಿಟ್ಟು ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ಲಾರಿ ಚಾಲಕನನ್ನು ಬೆನ್ನಟ್ಟಿದ್ದು, ಹಲ್ಲೆಗೆ ಯತ್ನಿಸಲಾಗಿದೆ. ವಿಷಯ ತಿಳಿದ ಗಸ್ತು ನಿರತರಾಗಿದ್ದ ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ನಂದಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ 11 ಬೈಕ್ ಗಳ ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.