ಕಾಸರಗೋಡು: ಜಿಲ್ಲಾ ಸೈಬರ್ ಕ್ರೈಂ ಠಾಣೆಯನ್ನು ವಿಡಿಯೋ ಮೂಲಕ ಉದ್ಘಾಟಿಸಿದ ಕೇರಳ ಸಿಎಂ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 01. ಜಿಲ್ಲಾ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೈಬರ್ ಅಪರಾಧಿಗಳಿಗೆ ಶಿಕ್ಷೆಯನ್ನು ಖಚಿತಪಡಿಸಲು ನಿಯಮದಲ್ಲಿ ಬದಲಾವಣೆ ತರಲಾಗುವುದು ಎಂದು ಹೇಳಿದರು. ಈಗೀಗ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಹಾಗೂ ಮಹಿಳೆಯರ ಮೇಲೆ ಅವಹೇಳನಗಳು ಹೆಚ್ಚುತ್ತಿದ್ದು, ಇದರಿಂದಾಗಿ ಸಾಮಾಜಿಕ ಜಾಲ ತಾಣಗಳ ದುರುಪಯೋಗಗಳನ್ನು ನಿಯಂತ್ರಿಸುವುದು ಅನಿವಾರ್ಯ ಎಂದು ಹೇಳಿದರು.

Also Read  ಆಧಾರ್ - ಪಾನ್ ಲಿಂಕ್ ಗೆ ಗಡುವು ವಿಸ್ತರಿಸಿದ ಕೇಂದ್ರ

error: Content is protected !!
Scroll to Top