ಪೊಲೀಸರಿಂದ ಕೊಲೆ ಆರೋಪಿಗಳ ಮೇಲೆ ಫೈರಿಂಗ್➤ ನಾಲ್ವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 02. ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರು ಕೊಲೆ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಾಲ್ವರು ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗೋಪಿ, ಗಂಗಾ, ಅನಂತ, ಬಸವ ಎಂದು ಗುರುತಿಸಲಾಗಿದೆ.

 

 

ವಿನೀತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಠಾಣೆ ಪೊಲೀಸರು ಅವಡ ದೇವನಹಳ್ಳಿಯಲ್ಲಿ ದಾಳಿ ನಡೆಸಿದ್ದ ವೇಳೆ ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಇಬ್ಬರು ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಆರೋಪಿಗಳ ಕಾಲಿಗೆ ಆನೇಕಲ್ ಡಿವೈಎಸ್ಪಿ ಮಹದೇವ್ ಹಾಗೂ ಇನ್ಸ್ ಪೆಕ್ಟರ್ ಕೃಷ್ಣ ಫೈರಿಂಗ್ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ವೇಳೆ ಮುತ್ಯಾನಲ್ಲೂರಿನಲ್ಲಿ ಕೂಡ ಇಬ್ಬರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ನಡೆಸಿ ಬಂಧಿಸಿದ್ದಾರೆ.

Also Read  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

error: Content is protected !!
Scroll to Top