ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಕಾರು ➤ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಾರವಾರ  . 03: ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ನಾಲೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಇಂದು ಮುಂಜಾನೆ ಸಂಭವಿಸಿದೆ.

 

ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ್ (28) ಹಾಗೂ ರಾಕೇಶ(28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾದಿಂದ ಗೋವಾಕ್ಕೆ ತೆರಳುವಾಗ ಲಂಡನ್ ಬ್ರಿಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ನಾಲಾಕ್ಕೆ ಕಾರು ಬಿದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

 

 

Scroll to Top