ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ವಿಧಿವಶ

(ನ್ಯೂಸ್ ಕಡಬ) newskadaba.com ಬಿಸಿರೋಡ್ . 03: ಬಿಸಿರೋಡ್ ಮೂಲದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ ಶ್ಯಾಮರಾವ್ (97) ರವರು ಮಂಗಳವಾರ ಬೆಳ್ಳಿಗೆ ಶಿವಮೊಗ್ಗದ ಮೆಟ್ರೋ ಆಸ್ಪತ್ತೆಯಲ್ಲಿ ವಿಧಿವಶರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶಿವಮೊಗ್ಗದಲ್ಲಿ ಇರುವ ಮಗನ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು.

1946ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನು 1946ರಲ್ಲಿ ಬಂಧಿತರಗಿ ಶಿವಮೊಗ್ಗದ ಜೈಲಿನಲ್ಲಿ 2 ತಿಂಗಳ ಕಾಲ ಜೈಲು ಶಿಕ್ಷೆಗೆ ಒಳಗಾದರು .ಸ್ವಾತಂತ್ರ್ಯ ಸಿಕ್ಕ ನಂತರವೂ ತಮ್ಮ ಸೇವಾ ಕಾರ್ಯವನ್ನು ಮುಂದುವರೆಸುಕೊಂಡು ಬಂದಿದ್ದರು. ಇವರು ಕನ್ನಡ, ತಮಿಳು, ತೆಲುಗು ಹಿಂದಿ, ಇಂಗ್ಲೀಷ್ ಭಾಷೆ ಬಲ್ಲವರಾಗಿದ್ದರು. ಮೃತರು ಪತ್ನಿ ರಾಜೀವಿ, ಪುತ್ರ ಸತೀಶ್ ಹಾಗೂ ಐದು ಮಂದಿ ಹೆಣ್ಣು ಮಕ್ಕಳ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Also Read  ಪುತ್ತೂರು : ಅಕ್ರಮ ಗೋ ಸಾಗಾಟ      ➤ ಇಬ್ಬರು ಆರೋಪಿಗಳ ಬಂಧನ...!!!  

 

 

error: Content is protected !!
Scroll to Top