ಮಗುವಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ ಪ್ರಕರಣ ➤ ಕುಟುಂಬದ ಮೂವರೂ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ . 04: ಬೆಳ್ತಂಗಡಿಯ ಕೊಕ್ರಾಡಿಯಲ್ಲಿ ಸೋಮವಾರ ರಾತ್ರಿ ಮಗುವಿನೊಂದಿಗೆ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು, ಈ ಪ್ರಕರಣದಲ್ಲಿ ತಂದೆ ಹಾಗೂ ಮಗು ಚಿಕಿತ್ಸೆ ಫಲಿಸದೆ ಕಳೆದ ದಿನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಆದರೆ ಇಂದು ಅವರ ಪತ್ನಿಯು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

 

ಕೊಕ್ರಾಡಿಯ ಅತ್ರಿಜಾಲು ನಿವಾಸಿ ಚಂದ್ರಶೇಖರ ಶೆಟ್ಟಿಗಾರ್(37) ಪತ್ನಿ ಆಶಾ(30) ಹಾಗೂ 5 ವರುಷ ಪ್ರಾಯದ ಪುತ್ರಿಗೂ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದ ಮೂವರ ಸ್ಥಿತಿಯು ಚಿಂತಾಜನಕವಾಗಿತ್ತು.ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಯತ್ನಿಸಿರಬಹುದೆಂದು ಸ್ಥಳಿಯರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವೇಣೂರು ಪೋಲಿಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಇಂದು ಚಂದ್ರಶೇಖರ್ ರವರ ಪತ್ನಿಯು ಮೃತಪಟ್ಟಿದ್ದಾರೆ. ಪ್ರಕರಣದಲ್ಲಿ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

Also Read  ರೈಲ್ವೇ ಹಳಿ ಮೇಲೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

error: Content is protected !!
Scroll to Top