ಶಿವಮೊಗ್ಗ: ಬಾಂಬ್ ಸ್ಫೋಟಗೊಂಡು ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 03. ಹಂದಿ ಹೊಡೆಯಲೆಂದು ಸಂಗ್ರಹಿಸಿಡಲಾಗಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸಮೀಪದ ಕುಂಚೇನಹಳ್ಳಿ ಎಂಬಲ್ಲಿ ನಡೆದಿದೆ.

 

ಇದರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಕಾಡುಹಂದಿ ಬೇಟೆಯಾಡಲು ನಾಡಬಾಂಬ್‌ ಒಂದನ್ನು ಸಂಗ್ರಹಿಸಿ, ಅದನ್ನು ಒಣಗಿಸಲೆಂದು ಬಿಸಿಲಿಗೆ ಹಾಕಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Scroll to Top