(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ರಾಗಿಣಿ ಮತ್ತು ಸಂಜನಾ ಸೇರಿದಂತೆ ಒಟ್ಟು ಆರೋಪಿಗಳು ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು.ಮಾದಕ ದ್ರವ್ಯ ವ್ಯಸನಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 4 ರಂದು ಸಿಸಿಬಿ ಪೊಲಿಸರು ಮೊದಲು ನಟಿ ರಾಗಿಣಿ ಮನೆ ಮೇಲೆ ದಾಳಿ ಮಾಡಿದ್ದರು.
ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿದ್ದು ಅಧಿಕಾರಿಗಳು ವಿಚಾರಣೆಗಾಗಿ ನಟಿಯನ್ನ ಸಿಸಿಬಿ ಕಚೇರಿಗೆ ಕರೆ ತಂದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ, ರಾತ್ರಿ ಮಹಿಳಾ ಸಾಂತ್ವನ ಕೇಂದ್ರದಲ್ಲಿರಿಸಿ ವಿಚಾರಣೆ ನಡೆಸಿತ್ತು. ಎನ್‍ಡಿಪಿಎಸ್ ಕೋರ್ಟ್ ನಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ನಟಿಯನ್ನ ಪರಪ್ಪನ ಅಗ್ರಹಾರದಲ್ಲಿರಿಸಲಾಗಿತ್ತು.ಇಬ್ಬರ ವಿರುದ್ಧವೂ ಡಿಜಿಟಲ್ ಸಾಕ್ಷ್ಯ ಲಭ್ಯವಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ಜಾಮೀನು ಕೊಟ್ಟರೆ ಇಬ್ಬರು ಪ್ರಭಾವಿಗಳಾಗಿದ್ದರಿಂದ ಪ್ರಕರಣದ ಪ್ರಭಾವ ಬೀರುವ ಸಾಧ್ಯತೆಗಳಿವೆ ಹಾಗಾಗಿ ಜಾಮೀನು ನೀಡಕೂಡದ ಎಂದು ಸಿಸಿಬಿ ಪರ ವಕೀಲರು ವಾದ ಮಂಡಿಸಿದ್ದರು.