ರಿಪಬ್ಲಿಕ್ ಟಿವಿ ಮುಖ್ಯಸ್ಥ, ಪತ್ರಕರ್ತ ಅರ್ನಬ್ ಗೋಸ್ವಾಮಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ . 04: ಇಂದು ಪೊಲೀಸರು ತೆರಳಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಅರ್ನಬ್ ಗೋಸ್ವಾಮಿ ಬಂಧನಕ್ಕೆ ಪೊಲೀಸರು ಯಾವುದೇ ಪತ್ರ, ಸಮನ್ಸ್ ನೀಡಿಲ್ಲ ಎನ್ನಲಾಗಿದೆ.

53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿಯವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.ಇಂದು ಬೆಳಗ್ಗೆ ಮುಂಬೈಯಲ್ಲಿರುವ ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಹಠಾತ್ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು ಬಂಧಿಸಲು ಯತ್ನಿಸಿದರು. ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ಪೊಲೀಸರು ಯತ್ನಿಸಿದರು ಎಂದು ಪತ್ರಕರ್ತ ಅರ್ನಬ್ ಗೋಸ್ವಾಮಿ ಆರೋಪಿಸಿದ್ದಾರೆ.

Also Read  ಎತ್ತು ಮತ್ತು ದನ ಕಳವು

 

 

error: Content is protected !!
Scroll to Top