ಸ್ವರ ಮಾಂತ್ರಿಕ ಎಸ್‍ಪಿಬಿ ಹಾಗೂ ಲಕ್ಷ್ಮಿ ಅಭಿನಯದ ಸಿನಿಮಾ ರಿಲೀಸ್‍ಗೆ ಸಿದ್ಧತೆ

(ನ್ಯೂಸ್ ಕಡಬ) newskadaba.com ಬೆಂಗಳೂರು . 04: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಚಿತ್ರಮಂದಿರ ಪ್ರವೇಶಿಸಲಿದೆ. ಕೇವಲ ಗಾಯಕರಾಗಿ ಅಲ್ಲದೇ ಎಸ್‍ಪಿಬಿ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.

 

 

ಕನ್ನಡ ಸೇರಿದಂತೆ 70ಕ್ಕೂ ಅಧಿಕ ಸಿನಿಮಾಗಳಲ್ಲಿ ಎಸ್‍ಪಿಬಿ ನಟಿಸಿದ್ದಾರೆ.8 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ತೆಲುಗು ಮಿಥುನಂ ಕನ್ನಡದಲ್ಲಿ ಮಿಥುನನಾಗಿ ತೆರೆಗೆ ಅಪ್ಪಳಿಸಲಿದೆ. 2012ರಲ್ಲಿ ತೆರೆಕಂಡಿದ್ದ ಈ ಸಿನಿಮಾದಲ್ಲಿ ಎಸ್‍ಪಿಬಿ ಮತ್ತು ಲಕ್ಷ್ಮಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಶ್ರೀರಮಣ ರಚಿತ ಮಿಥುನಂ ಕಾದಂಬರಿಯನ್ನ ನಿರ್ದೇಶಕ ತನಿಕೆಳ್ಳ ಭರಣಿ ತೆರೆಯ ಮೇಲೆ ತಂದು ಮೋಡಿ ಮಾಡಿದ್ದರು.

Also Read  ವೈದ್ಯರ ರಕ್ಷಣಾ ಮಸೂದೆಗೆ ರಾಜ್ಯಪಾಲರ ಅಂಕಿತ - ವೈದ್ಯರ ಮೇಲೆ ಹಲ್ಲೆ ಮಾಡಿದರೆ 7 ವರ್ಷ ಜೈಲು ಶಿಕ್ಷೆ

ಕಾದಂಬರಿ ಆಧಾರಿತ ಈ ಸಿನಿಮಾ ನಾಲ್ಕು ರಾಜ್ಯ ಪ್ರಶಸ್ತಿಗಳನ್ನ ತನ್ನದಾಗಿಸಿಕೊಂಡಿತ್ತು.ಡಿಸೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ರಾಜ್ಯಾದ್ಯಂತ ಚಿತ್ರ ಬಿಡುಗಡೆಗೆ ಪ್ಲಾನ್ ಮಾಡಿಕೊಳ್ಳಲಾಗಿದ್ದು, ರಿಲೀಸ್ ದಿನಾಂಕ ಅಂತಿಮವಾಗಬೇಕಿದೆ.

error: Content is protected !!
Scroll to Top