IPL ಕ್ರಿಕೆಟ್ ಬೆಟ್ಟಿಂಗ್‍ ➤ ಮೂರು ಮಂದಿಯ ಅರೇಸ್ಟ್



(ನ್ಯೂಸ್ ಕಡಬ) newskadaba.com ಬೆಂಗಳೂರು . 04: IPL ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ಭಾಗಿಯಾಗಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.





ಜಯನಗರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ತಿಲಕ್ ನಗರದ ಮೊಬೈಲ್ ಅಂಗಡಿಯೊಂದರ ಮೇಲೆ ದಾಳಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿತ ಆರೋಪಿಗಳಿಂದ 2.21 ಲಕ್ಷ ರೂ. ನಗದು ಹಾಗೂ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ಅಂಗಡಿ ಮಾಲೀಕ ಅಜೇಯ (35), ಕಿರಣ್ (32), ಹಾಗೂ ಸಂದೀಪ್ (28) ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.

 

 






error: Content is protected !!
Scroll to Top