ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಣೆ.!

(ನ್ಯೂಸ್ ಕಡಬ) newskadaba.com ಬೆಂಗಳೂರು . 05: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಘೋಷಿಸಲಾಗಿದೆ. 78 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ ಕಂಡುಬಂದುದರಿಂದ, ಎಮರ್ಜೆನ್ಸಿ ಘೋಷಿಸಲಾಗಿದೆ.

 

ಲುಫ್ತಾನ್ಸಾ ಏರ್ ಲೈನ್ಸ್ ವಿಮಾನ ಟೇಕಾಫ್ ವೇಳೆ ತಾಂತ್ರಿಕ ದೋಷ ಕಂಡು ಬಂದಿದ್ದು, ವಿಷಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಬಳಿಕ, ವಿಮಾನವನ್ನು ಸುರಕ್ಷಿತವಾಗಿ ಭೂಸ್ಪರ್ಷ ಮಾಡಿಸಲಾಗಿದೆ ಎಂದು ತಿಳಿದು ಬಂದಿದೆ. ಎಮರ್ಜೆನ್ಸಿ ಘೋಷಿಸಿದ ಕಾರಣ ವಿಮಾನ ನಿಲ್ದಾಣದಲ್ಲಿ ಕೆಲವು ಕ್ಷಣ ಆತಂಕ ಸೃಷ್ಟಿಯಾಯಿತು ಎಂದು ವರದಿಗಳು ತಿಳಿಸಿವೆ.

 

 

Scroll to Top