ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ► ಇಂದು ಮಂಗಳೂರಿಗೆ ಭೇಟಿ

 (ನ್ಯೂಸ್ ಕಡಬ) newskadaba.com  ಮಂಗಳೂರು,ಅ.02. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ. ಹೀಗಾಗಿ ಈ ಕ್ಷೇತ್ರಗಳನ್ನು ಹೊಡೆದುರುಳಿಸಲು ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್‍ಎಸ್‍ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ. ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿಯು ಅತೀ ಹೆಚ್ಚು ಶಾಸಕ ಸ್ಥಾನಗಳನ್ನು ಪಡೆಯಬೇಕೆಂದು ಬಿಜೆಪಿ ಶತಪ್ರಯತ್ನ ಪಡುತ್ತಿದೆ.

ಬಿಜೆಪಿಯ ಹೈಕಮಾಂಡ್ ಈ ಬಾರಿ ಸ್ವತಃ ರಣರಂಗಕ್ಕೆ ಇಳಿಯಲು ತಯಾರಿ ನಡೆಸಿದೆ. ಅದರ ಮೊದಲ ಪ್ರಯತ್ನವಾಗಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳೂರಿಗೆ ಇಂದು ಆಗಮಿಸುತ್ತಿದ್ದಾರೆ.

Also Read  ಇಂದು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಸವಣೂರಿನಲ್ಲಿ ಪತ್ರಿಕಾ ದಿನಾಚರಣೆ

ಅಕ್ಟೋಬರ್ 4ರ ತನಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಮಿತ್ ಶಾ ಪ್ರವಾಸ ಮಾಡಲಿದ್ದಾರೆ. ಅಕ್ಟೋಬರ್ 4 ರಂದು ಇಡೀ ದಿನ ಮಂಗಳೂರಿನಲ್ಲಿ ಪಕ್ಷ ಸಂಘಟನೆ ಹಾಗೂ ಇತರ ವಿಷಯಗಳ ಬಗ್ಗೆ ರಾಜ್ಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.

error: Content is protected !!
Scroll to Top