ಸುಳ್ಯ :ನಗರ ಪಂಚಾಯತ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು . 05: ಸುಳ್ಯನಗರ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯು ಇಂದು ನಡೆದಿದೆ. ಆಧ್ಯಕ್ಷ ಸ್ಥಾನವನ್ನು ವಿನಯ್ ಕುಮಾರ್ ಕುಂದಡ್ಕ ಅಲಂಕರಿಸಿದರೆ, ಉಪಾಧ್ಯಕ್ಷ ಸ್ಥಾನವನ್ನು ಸರೋಜಿನಿ ಪೆಲತ್ತಡ್ಕ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

 

 

ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಅನಂತ ಶಂಕರ್ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್ ಅಂಗಾರ, ಉಪತಹಶೀಲ್ದಾರ್ ಚಂದ್ರಕಾಂತ್ ಕಂದಾಯ ನಿರೀಕ್ಷಕರು ಕೊರಗಪ್ಪ ಹೆಗಡೆ ಹಾಗೂ ನಗರ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

 

 

Scroll to Top