(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ. 05. ಉಪ್ಪಿನಂಗಡಿ- ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಹೆದ್ದಾರಿಯ ದುರಸ್ತಿಯನ್ನು ಆಗ್ರಹಿಸಿ ಎಸ್ ಡಿ ಪಿ ಐ ಪಕ್ಷದ ವತಿಯಿಂದ ಪ್ರತಿಭಟನೆ ನಡೆಯಿತು.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಸಂಪೂರ್ಣ ಹದಗೆಟ್ಟುಹೋಗಿದ್ದು, ಸಂಚಾರ ಅಸಾಧ್ಯವಾಗಿದೆ. ಈ ಕಾಮಗಾರಿಯ ಜವಾಬ್ದಾರಿ ವಹಿಸಿಕೊಂಡವರು ಮರಗಳನ್ನು ಕಡಿದು, ಗುಡ್ಡಗಳನ್ನು ಜರಿಸುವ ಕೆಲಸವನ್ನು ಮಾತ್ರ ಮಾಡಿದ್ದಾರೆ. ಹೆದ್ದಾರಿಯ ಬಳಿ ಅಲ್ಲಲ್ಲಿ ಅಗೆದಿದ್ದು, ಇದರಿಂದಲೂ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಶೀಘ್ರವಾಗಿ ವ್ಯವಸ್ಥಿತವಾದ ಕಾಮಗಾರಿ ಆರಂಭಿಸದಿದ್ದಲ್ಲಿ, ಹೊಂಡ ಗುಂಡಿಗಳನ್ನು ಮುಚ್ಚಿ ರಸ್ತೆಯನ್ನು ಸುರಕ್ಷಿತವಾಗಿರಿಸದಿದ್ದಲ್ಲಿ ಎಸ್‍ಡಿಪಿಐ ವಿವಿಧ ಸಂಘಟನೆ ಹಾಗೂ ನಾಗರಿಕರು ಸಹಕಾರದೊಂದಿಗೆ ಸಂಪೂರ್ಣವಾಗಿ ಹೆದ್ದಾರಿ ತಡೆ ನಡೆಸಿ ಬೃಹತ್ ಹೋರಾಟವನ್ನು ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.