ಸುಳ್ಯದಲ್ಲಿ ಗಾಂಜಾ ಸಾಗಾಟ ➤ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಸುಳ್ಯ . 06: ಸುಳ್ಯದಲ್ಲಿ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಸುಳ್ಯ ಠಾಣಾ ಉಪನಿರೀಕ್ಷಕರ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕೇರಳ ರಾಜ್ಯದ ರಿಜಿಸ್ಟರ್ ನಂಬರ್ ಹೊಂದಿದ್ದ ಕಾರಿನಲ್ಲಿ ಅಕ್ರಮವಗಿ ಗಾಂಜಾ ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧಾರಿಸಿ ಸುಳ್ಯ ಠಾಣಾ ಉಪನಿರೀಕ್ಷಕರಾದ ಹರೀಶ್ ಎಮ್ ಆರ್ ತಂಡದೊಂದಿಗೆ ಕಾರ್ಯಾಚರಣೆ ನಡೆಸಿ ಸುಳ್ಯ ಜ್ಯೋತಿ ಸರ್ಕಲ್ ಬಳಿ 8ಕೆ,ಜಿ ಗಾಂಜಾ ಸಹಿತ ಆರೋಪಿಗಳಾದ ಎಂ ಎ ಅಬ್ಬಾಸ್(63) ಅಬ್ದುಲ್ (50) ರವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Also Read  ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ - ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

 

 

 

 

error: Content is protected !!
Scroll to Top