ಹಿರಿಯ ಪತ್ರಕರ್ತ ಸೂರ್ಯನಾರಾಯಣ ಪೂವಳ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, . 06: ಹಿರಿಯ ಪತ್ರಕರ್ತ ಕಲ್ಲಡ್ಕ ಸಮೀಪ ಅಮ್ಟೂರು ಪೂವಳ ನಿವಾಸಿ ಸೂರ್ಯನಾರಾಯಣ ರಾವ್ ಪೂವಳ (51) ಅಲ್ಪಕಾಲದ ಅಸೌಖ್ಯದಿಂದ ತನ್ನ ಮನೆಯಲ್ಲಿ ನಿಧನ ಹೊಂದಿದರು.ಕಳೆದ ಇಪ್ಪತ್ತೈದು ವರ್ಷಗಳಿಗಿಂತಲೂ ಅಧಿಕ ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಇವರು, ಇಂದು ಮುಂಜಾನೆ ವಿಧಿವಶರಾಗಿದ್ದಾರೆ.

 

 

ಕಳೆದೆರಡು ತಿಂಗಳಿಂದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕಳೆದ ದಿನ (ಗುರುವಾರ) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.  ಮೃತರು ತಾಯಿ, ಪತ್ನಿ ಸಹಿತ ಅಪಾರ ಬಂಧು, ಮಿತ್ರರನ್ನು ಅವರು ಅಗಲಿದ್ದಾರೆ.

Also Read  ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ

 

 

 

error: Content is protected !!
Scroll to Top