ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಉಗ್ರನ ಹತ್ಯೆ

(ನ್ಯೂಸ್ ಕಡಬ) newskadaba.com ಪುಲ್ವಾಮ, . 06: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆ ಪಾಂಪೋರ್ ನಲ್ಲಿ ಉಗ್ರ ನಿಗ್ರಹಕ ಕಾರ್ಯಚರಣೆ ಮುಂದುವರೆದಿದ್ದು, ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ, ಇಂದು ಓರ್ವ ಉಗ್ರನನ್ನು ಹತ್ಯೆ ಗೈದಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

 

 

 

ಪಾಂಪೋರ್’ನ ಲಾಲ್ಪೊರಾ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೂ ಕಾರ್ಯಾಚರಣೆ ನಡೆಸುತ್ತಿದ್ದರು. ಶೋಧ ಕಾರ್ಯ ಮುಂದುವರಿಯುತ್ತಿದ್ದ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲಿಂದ ಪರಾರಿಯಾಗುವುದಕ್ಕೂ ಪ್ರಯತ್ನಿಸಿದ್ದಾರೆ. ಇದೇ ವೇಳೆ ಯೋಧರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಅದರಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ. ಉಗ್ರರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡೇ ಭದ್ರತಾ ಪಡೆ ಶೋಧ ಮತ್ತು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದ್ದು ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಮತ್ತೇ ಭುಗಿಲೆದ್ದ ಹಿಂಸಾಚಾರ..! ➤ 40 ಕ್ಕೂ ಹೆಚ್ಚು ಉಗ್ರರ ಹತ್ಯೆ

 

error: Content is protected !!
Scroll to Top