ಪೋಷಕರು ಮೊಬೈಲ್ ಕಸಿದುಕೊಂಡಿದ್ದಕ್ಕೆ ಬಾಲಕ ಆತ್ಮಹತ್ಯೆ.!!

(ನ್ಯೂಸ್ ಕಡಬ) newskadaba.com ಮಧುರೈ . 06: ಮೊಬೈಲ್‍ನಲ್ಲಿ ಹೆಚ್ಚು ಗೇಮ್ ಆಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ 16 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಯಾವಾಗಲೂ ಗೇಮ್ ಆಡುವುದಕ್ಕೆ ಪೋಷಕರು ಮೊಬೈಲ್ ಕಸಿದುಕೊಂಡಿದ್ದು, ಇದರಿಂದ ಅಸಮಾಧಾನಗೊಂಡ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

 

 

ಸಂಬಾಕುಲಂನ ಗಾಂಡಿ 2ನೇ ರಸ್ತೆಯ ನಿವಾಸಿಯಾಗಿದ್ದ ಬಾಲಕ ಮೊಬೈಲ್ ಗೇಮಿಂಗ್ ವ್ಯಸನಿಯಾಗಿದ್ದ ಇತ್ತೀಚೆಗೆ ಪೋಷಕರು ಮೊಬೈಲ್ ಕಸಿದುಕೊಂಡಿದ್ದರು. ಇದರಿಂದಾಗಿ ಬಾಲಕ ತೀರಾ ಅಸಮಾಧಾನಗೊಂಡಿದ್ದ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 

 

Scroll to Top