ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ವಾಸುದೇವ ಸಾಮಗ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ. 07: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ ಮಲ್ಪೆ ವಾಸುದೇವ ಸಾಮಗ(1) ಅವರು ಅಲ್ಪ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ನಿಧನರಾಗಿದ್ದಾರೆ.

 

 

 

ವಾಸುದೇವ ಸಾಮಗ ಅವರು ತೆಂಕು-ಬಡಗುತಿಟ್ಟಿನ ಸವ್ಯಸಾಚಿ ಕಲಾವಿದರೆಂದು ಗುರುತಿಸಲ್ಪಟ್ಟಿದ್ದು, ಅನೇಕ ಪ್ರಸಂಗಗಳಲ್ಲಿ ನಾಯಕ, ಪ್ರತಿನಾಯಕ, ಹಾಸ್ಯ ಸ್ತ್ರೀವೇಷವನ್ನು ನಿರ್ವಹಿಸಿದ್ದಾರೆ. ಇವರು ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದು, ವಿಭಿನ್ನ ನಿಲುವಿನ ಕೈಕೆ, ದಶರಥ, ದೇವವ್ರತ-ಭೀಷ್ಮ ಕಂಸ ಕೃಷ್ಣ, ರುಕ್ಮಾಂಗದ-ಮೋಹಿನಿ, ಅಂಬೆ-ಪರಶುರಾಮ, ಮಂಥರೆ ಮುಂತಾ ಪಾತ್ರಗಳಲ್ಲಿಯೂ ಸೈ ಎನಿಸಿಕೊಂಡಿದ್ದಾರೆ.

Also Read  ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ 

 

 

error: Content is protected !!
Scroll to Top