(ನ್ಯೂಸ್ ಕಡಬ) newskadaba.com ಮಂಗಳೂರು, ನ .07. ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವನ್ನು ನವೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Also Read ಬೆದ್ರೋಡಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ► ಪರಿಸರದಲ್ಲಿ ಬೆಂಕಿ ಬಳಸದಂತೆ ಮುನ್ನೆಚ್ಚರಿಕೆ