(ನ್ಯೂಸ್ ಕಡಬ) newskadaba.com ಕಾರವಾರ,ಅ.03. ಸಮುದ್ರಕ್ಕೆ ಆಟವಾಡಲು ತೆರಳಿದ್ದ ಬಾಲಕರಿಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಣ್ಣಬಾವಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಗಣೇಶ ನಾಯ್ಕ(10) ಮತ್ತು ವಿನಾಯಕ ನಾಯ್ಕ(09) ಮೃತ ದುರ್ದೈವಿಗಳು. ಸೋಮವಾರ ಸಂಜೆ ನೀರಲ್ಲಿ ಆಟವಾಡುತ್ತಿದ್ದ ವೇಳೆ ಇಬ್ಬರು ಬಾಲಕರು ಸಮುದ್ರದ ಅಲೆಗಳಿಗೆ ಸಿಳುಕಿ ಕೊಚ್ಚಿ ಹೋಗಿದ್ದರು. ತಡರಾತ್ರಿ ಹುಡುಕಾಟ ನಡೆಸಿದರೂ ಇಬ್ಬರು ಬಾಲಕರ ಸುಳಿವು ಸಿಕ್ಕಿರಲಿಲ್ಲ.
ಇಂದು ಬೆಳಿಗ್ಗೆ ಗ್ರಾಮದ ಕಡಲತೀರದಲ್ಲಿ ಬಾಲಕರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.