(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.8: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸಭೆ ಮತ್ತು ಕಸ್ತೂರಿ ರಂಗನ್ ವರದಿ ಯೋಜನೆ ವಿರುದ್ಧದ ಹೋರಾಟದ ಸಮಾಲೋಚನೆ ಸಭೆ ಕಳೆದ ದಿನ ಸುಬ್ರಹ್ಮಣ್ಯದಲ್ಲಿ ನಡೆಯಿತು.
ದ.ಕ ಜಿಲ್ಲೆಯ ಸುಳ್ಯ, ಕಡಬ ಮತ್ತು ಬೆಳ್ತಂಗಡಿ ತಾಲೂಕುಗಳ ತಹಸೀಲ್ದಾರ್ ಕಛೇರಿ ಎದುರು 10 ಸಾವಿರ ಜನ ಮಂದಿಯನ್ನು ಸೇರಿಸಿ ಕಸ್ತೂರಿ ರಂಗನ್ ವರದಿ ಯೋಜನೆ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬೃಹತ್ ಪ್ರತಿಭಟನೆ ಮತ್ತು ಆ ಪ್ರಯುಕ್ತ ಪೂರ್ವಭಾವಿ ಜಾಗೃತಿ ಮೂಡಿಸಲು ತಾಲೂಕುಗಳಲ್ಲಿ ಬೈಕ್ ರಾಲಿ, ಯೋಜನೆ ಬಾದಿತ ಪ್ರತೀ ಗ್ರಾಮ ಪಂಚಾಯತ್ ಗಳಲ್ಲಿ ಸರಕಾರಕ್ಕೆ ಮನವಿ ಸಲ್ಲಿಕೆ, ಪ್ರಚಾರ, ಕರಪತ್ರ ಹಂಚುವಿಕೆ ಮೊದಲಾದ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ನ.24 ರಂದು ಕಡಬ, ನ.27 ರಂದು ಸುಳ್ಯ ತಹಸೀಲ್ದಾರರ ಕಛೇರಿ ಎದುರು ಬೃಹತ್ ಪ್ರತಿಭಟನಾ ಸಭೆ ನಡೆಸಲು ತೀರ್ಮಾನಿಸಿದೆ. ಸಭೆಯಲ್ಲಿ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಜಿಲ್ಲಾ ಸಮಿತಿ ಸದಸ್ಯರಾದ ಭಾನುಪ್ರಕಾಶ್ ಪರುಮುಂಡ ಹಾಗೂ ಜಿಲ್ಲಾ ಸಮಿತಿ ಸದಸ್ಯರುಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.