ಭಾರತೀಯ ಮೂಲದ ಮಹಿಳೆ ಕಮಲಾ ಹ್ಯಾರಿಸ್​ ಅಮೆರಿಕ ಉಪಾಧ್ಯಕ್ಷೆ

(ನ್ಯೂಸ್ ಕಡಬ) newskadaba.com ಅಮೆರಿಕ  . 08: ಜೋಸೆಫ್​ ಬಿಡೆನ್​ ಅಮೆರಿಕ ಅಧ್ಯಕ್ಷರಾಗುತ್ತಿದ್ದಂತೆ ಕಮಲ ಹ್ಯಾರಿಸ್​ ಉಪಾಧ್ಯಕ್ಷರಾಗಿದ್ದಾರೆ. ಈ ಮೂಲಕ ಶ್ವೇತಭವನಕ್ಕೆ ಪ್ರವೇಶಿಸಿದ ಬ್ಲಾಕ್​ ಅಮೆರಿಕನ್​ ಅವರಾಗಿದ್ದಾರೆ. ಅಮೆರಿಕದ ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ ಮೊದಲ ಏಷ್ಯಾನ್​ ಅಮೆರಿಕನ್​ ಮಹಿಳೆ ಇವರಾಗಿದ್ದಾರೆ.

ಕ್ಯಾಲಿಫೋರ್ನಿಯಾದ ಸೆನೆಟರ್​ ಆಗಿರುವ ಹ್ಯಾರಿಸ್​, ಈ ಮೊದಲು ಸ್ಯಾನ್​ಫ್ರಾಸಿಸ್ಕೋದಲ್ಲಿ ವಕೀಲರಾಗಿದ್ದರು. ಅಲ್ಲದೇ ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್​ ಆಗಿ ಕೂಡ ಸೇವೆ ಸಲ್ಲಿಸಿದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಭಾರತೀಯ ಮೂಲದ ಹ್ಯಾರಿಸ್​ ಶ್ವೇತಭವನ ಪ್ರವೇಶ ಭಾರತೀಯರಲ್ಲಿಯೂ ಸಂತಸ ತಂದಿದೆ. ಇನ್ನು ,ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಭಾರತ ಮೂಲದ ಕಮಲಾ ಹ್ಯಾರೀಸ್​ ಅವರಿಗೂ ಅಭಿನಂದನೆ ತಿಳಿಸಿರುವ ಪ್ರಧಾನಿ ಮೋದಿ, ನಿಮ್ಮ ಗೆಲುವು ಎಲ್ಲ ಭಾರತೀಯ ಅಮೆರಿಕನ್ನರಿಗೆ ಹೆಮ್ಮೆಯ ವಿಷಯವಾಗಿದೆ. ನಿಮ್ಮ ಪ್ರೋತ್ಸಾಹ, ನಾಯಕತ್ವದಿಂದ ಅಮೆರಿಕ ಮತ್ತು ಭಾರತದ ನಂಟು ಇನ್ನಷ್ಟು ಬಿಗಿಯಾಗಲಿದೆ ಎಂಬ ವಿಶ್ವಾಸ ನನಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

error: Content is protected !!

Join the Group

Join WhatsApp Group