ಬೆಳ್ತಂಗಡಿ: ಭಾರತೀಯ ಜನತಾ ಪಕ್ಷದ ವತಿಯಿಂದ ಮೆರವಣಿಗೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, .8: ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷರಾಗಿ ಶ್ರೀಮತಿ ರಜನಿ ಕುಡ್ವ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಗೌಡ ಟಿ ಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

 

ಈ ಹಿನ್ನಲೆಯಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಸಂತೆಕಟ್ಟೆಯಿಂದ ಬೆಳ್ತಂಗಡಿ ಮುಖ್ಯ ಬಸ್ ತಂಗುದಾಣದವರೆಗೆ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಜಯಂತ್ ಗೌಡ, ನ.ಪಂ ಸದಸ್ಯರು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

Also Read  ತಾರಸಿಯಿಂದ ಬಿದ್ದು ವಿದ್ಯಾರ್ಥಿ ದಾರುಣ ಸಾವು

 

 

error: Content is protected !!
Scroll to Top