(ನ್ಯೂಸ್ ಕಡಬ) newskadaba.com ಪುತ್ತೂರು, ನ.8: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಕುವೆತ್ತಿಲ ಸಮೀಪ ವಿದ್ಯುತ್ ಕಂಬದ ಪಕ್ಕದಲ್ಲಿ ಗರಿ ಮುರಿದು ತೆಂಗಿನ ಮರವೊಂದು ಬೀಳುವಂತ ಅಪಾಯಕಾರಿ ಸ್ಥಿತಿಯಲ್ಲಿದೆ. ಇದನ್ನು ಗಮನಿಸಿದ ಗಸ್ತು ನಿರತ ಹೈವೇ ಪೆಟ್ರೋಲ್ ಪಂಪ್ ಸಿಬ್ಬಂದಿ, ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಆಗಿರುವ ಶಿವಪ್ಪ ನಾಯ್ಕ್ ಅವರು ಅಪಾಯಕಾರಿ ತೆಂಗಿನಮರದ ಕುರಿತು ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಿದ್ದಾರೆ.
ಮರ ಮುರಿದು ಬಿದ್ದರೆ ಪಕ್ಕದಲ್ಲಿರುವ ವಿದ್ಯುತ್ ತಂತಿಗಳು ಮತ್ತು ನಾಲ್ಕೈದ್ ವಿದ್ಯುತ್ ಕಂಬಗಳಿಗೆ ಹಾನಿಯಾಗುವುದರೊಂದಿಗೆ ರಸ್ತೆಯಲ್ಲಿ ಓಡಾಡುವ ವಾಹನಗಳ ಮೇಲೂ ಬೀಳುವ ಸಾಧ್ಯತೆ ಇದೆ. ಹಾಗಾಗಿ ಅಪಾಯಕ್ಕೆ ಎಡೆ ಮಾಡಿಕೊಡದೆ ತಕ್ಷಣ ಅಪಾಯಕಾರಿ ತೆಂಗಿನ ಮರವನ್ನು ತೆರವುಗೊಳಿಸಬೇಕಾಗಿದೆ ಎಂದು ಹೈವೇ ಪೆಟ್ರೋಲ್ ಪಂಪ್ ಸಿಬ್ಬಂದಿ ಗಳು ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ರವಾನಿಸಿದ್ದಾರೆ.