ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಕಾಂಗ್ರೆಸ್‌ಗೆ ಸೇರ್ಪಡೆ.!?



(ನ್ಯೂಸ್ ಕಡಬ) newskadaba.com ಚೆನ್ನೈ . 08: ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಶೀಘ್ರವೇ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ. ನಾಳೆ ಬೆಳಿಗ್ಗೆ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ಹೇಳಿದೆ.







2019ರ ಸೆ.6 ರಂದು ರಾಜೀನಾಮೆ ಸಲ್ಲಿಸಿದ ನಂತರ ಸೆಂಥಿಲ್ ಸಿಎಎ, ಎನ್ ಆರ್ ಸಿ ವಿರುದ್ಧ ಪ್ರತಿಭಟನೆಯಲ್ಲಿ ಸಕ್ರಿಯವಾಗಿದ್ದರು. ತಮಿಳುನಾಡಿನವರಾದ ಸೆಂಥಿಲ್ ಇದೀಗ ಚೆನ್ನೈನಲ್ಲಿ ಇದ್ದಾರೆ. ಇವರು ಕೇಂದ್ರ ಸರ್ಕಾರದ ನೀತಿಗಳಿಂದ ಬೇಸತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ದೂರಿ ಐಎಎಸ್ ಸೇವೆಗೆ ರಾಜೀನಾಮೆ ನೀಡಿದ್ದರು.






 

error: Content is protected !!
Scroll to Top