(ನ್ಯೂಸ್ ಕಡಬ) newskadaba.com ಬೆಂಗಳೂರು ನ. 08: ಈ ಬಾರಿ ದೀಪಾವಳಿಗೆ ಹಸಿರು ಪಟಾಕಿಗಳನ್ನು ಹೊತ್ತಿಸಲು ಅವಕಾಶ ನೀಡಿದ ನಂತರ ಪಟಾಕಿಗಳ ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಕೋವಿಡ್-19 ಶಿಷ್ಟಾಚಾರದ ಮಧ್ಯೆ, ನವೆಂಬರ್ 7ರಿಂದ 16ರವರೆಗೆ ಮಾತ್ರ ಪಟಾಕಿಗಳ ಮಾರಾಟಕ್ಕೆ ಅವಕಾಶವಿದೆ. ಸರ್ಕಾರದ ಹೊಸ ಮಾರ್ಗಸೂಚಿಯನ್ನು ನಿನ್ನೆ ಬಿಡುಗಡೆಗೊಳಿಸಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್, ಜಿಲ್ಲಾಧಿಕಾರಿಗಳು, ಎಸ್ಪಿಗಳು, ಬೆಂಗಳೂರು ಸಿಟಿ ಪೊಲೀಸ್ ಆಯುಕ್ತರು, ಬಿಬಿಎಂಪಿಗಳಿಗೆ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ. ಪಟಾಕಿಗಳ ಮಾರಾಟವನ್ನು 17 ದಿನಗಳಿಂದ 10 ದಿನಗಳಿಗೆ ಇಳಿಸಿರುವ ರಾಜ್ಯ ಸರ್ಕಾರ, ಅಂಗಡಿಗಳಿಗೆ ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ಕೊಟ್ಟಿದೆ.
Also Read ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿನಿ ಕೊಲೆ ಪ್ರಕರಣ ➤ ನಾಪತ್ತೆಯಾಗಿದ್ದ ಸೆಕ್ಯುರಿಟಿ ಗಾರ್ಡ್ ಮೃತದೇಹ ಪತ್ತೆ