ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು.9: ಸ್ಕೂಟರ್ ಮಗುಚಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಮಂಜೇಶ್ವರ ಕುಂಜತ್ತೂರು ಪದವಿನಲ್ಲಿ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಗದಗ ಮೂಲದ ಯುವಕ ತಲಪಾಡಿ ದೇವಿನಗರದಲ್ಲಿ ವಾಸವಾಗಿರುವ ಹನುಮಂತ ಎಂದು ಗುರುತಿಸಲಾಗಿದೆ.

 

ಮಂಗಳೂರು ಕೊಡಿಯಾಲ್ ಬೈಲ್ ನ ಕ್ಯಾಂಟೀನ್ ವೊಂದರಲ್ಲಿ ದುಡಿಯುತ್ತಿದ್ದ ಹನುಮಂತ ಹಲವು ವರ್ಷಗಳಿಂದ ದೇವಿನಗರದಲ್ಲಿ ವಾಸವಾಗಿದ್ದರು. ಆದರೆ ಶನಿವಾರ ಮುಂಜಾನೆ ಕುಂಜತ್ತೂರು ಪದವಿ ರಸ್ತೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಕೂಟರ್ ಅಪಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗುತ್ತಿತ್ತು. ಅವರ ತಲೆಗೆ ಸಣ್ಣ ಪುಟ್ಟ ಗಾಯಗಳು ಹಾಗೂ ಸ್ಕೂಟರ್ ಹಾನಿಯಾಗದ ಕಾರಣ ಸಂಶಯ ಉಂಟಾಗಿತ್ತು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಗಾಗಿ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಬಳಿಕ ಮಂಜೇಶ್ವರ ಪೊಲೀಸ್ ಠಾಣೆಗೆ ಮರಣೋತ್ತರ ಪರೀಕ್ಷಾ ವರದಿ ಲಭಿಸಿದ್ದು, ಕುತ್ತಿಗೆಯನ್ನು ಬಿಗಿದು ಎರಡು ಬೆರಳಿನ ಗುರುತು ಪತ್ತೆಯಾಗಿದ್ದು, ಕತ್ತು ಹಿಸುಕಿ ಕೊಲೆಗೈದಿರುವುದಾಗಿ ಸಂಶಯಿಸಲಾಗಿದೆ.

Also Read  ಗಡಿಯಲ್ಲಿ ಪೊಲೀಸರ ಸರ್ಪಗಾವಲು ➤ 142 ಕೆಜಿ ಬೆಳ್ಳಿ ಕಾಲುಂಗುರ ವಶ, ಎಫ್​ಐಆರ್ ದಾಖಲು

 

 

error: Content is protected !!
Scroll to Top