ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಸಜ್ಜಿತ ಆರೋಗ್ಯ ಕೇಂದ್ರ ಸ್ಥಾಪನೆಗೆ ಬೇಡಿಕೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ . 09: ರಾಜ್ಯದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರು ಪಸಿದ್ಧ ಹಾಗೂ ಪವಿತ್ರವಾದ ನಾಗ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಸಜ್ಜಿತವಾದ ಆಸ್ಪತ್ರೆ ನಿರ್ಮಾಣವಾಗಬೇಕೆಂಬುದು ಬಹುಕಾಲದ ಕೂಗು. ಆರೋಗ್ಯ ಸಮಸ್ಯೆಯಾದಲ್ಲಿ ಚಿಕಿತ್ಸೆಗೆ ದೂರದೂರಿಗೆ ತೆರಳಬೇಕಾದ ಅನಿವಾರ್ಯತೆ ಸುಬ್ರಹ್ಮಣ್ಯದಲ್ಲಿ ಎದುರಾಗಿರುವುದರಿಂದ ಕ್ಷೇತ್ರಕ್ಕೆ ಬರುವ ಸಹಸ್ರಾರು ಭಕ್ತರ ಆರೋಗ್ಯದ ಹಿತದೃಷ್ಟಿಯಿಂದ ಕುಕ್ಕೆ ದೇವಳದಿಂದ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬ ಬೇಡಿಕೆ ಕೇಳಿಬಂದಿದೆ.

ಈ ಸಂಬಂಧ ನಾಗರಿಕರು ಪೂರ್ವಭಾವಿ ಸಭೆಯನ್ನೂ ನಡೆಸಿದ್ದಾರೆ.ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಹಂತದ ಚಿಕಿತ್ಸೆಗಳು ಮಾತ್ರ ಲಭ್ಯವಿದೆ. ಸುಬ್ರಹ್ಮಣ್ಯ ವ್ಯಾಪ್ತಿಯ ಜನತೆಗೆ, ಕ್ಷೇತ್ರಕ್ಕೆ ಭೇಟಿ ನೀಡುವ ಯಾತ್ರಿಕರಿಗೆ ಅನುಕೂಲವಾಗುವಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದಲೇ ಸುಸಜ್ಜಿತ 10 ಬೆಡ್‌ನ ಆಸ್ಪತ್ರೆ ನಿರ್ಮಿಸಲು ಸರಕಾರ ಕ್ರಮ ಕೈಗೊಳ್ಳಬೇಕು ಅಥವಾ ಈಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿಸಲಿ ಎಂಬ ಬೇಡಿಕೆಯಿರಿಸಿ ಸ್ಥಳೀಯರು ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸಿದ್ದಾರೆ. ಸುಬ್ರಹ್ಮಣ್ಯ ಪೇಟೆಯಲ್ಲಿಯೇ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊರರೋಗಿ ವಿಭಾಗ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 1.04 ಕೋಟಿ ರೂ. ಅನುದಾನ ಮಂಜೂರಾಗಿದೆ. ಇದಕ್ಕೆ ಕಾಶಿಕಟ್ಟೆಯ ಬಳಿ ದೇವಳದಿಂದ ಉಚಿತವಾಗಿ ನಿವೇಶನ ನೀಡಲಾಗಿದೆ. ಈಗಾಗಲೇ ಇಲ್ಲಿ ಕಟ್ಟಡ ನಿರ್ಮಾಣಕ್ಕೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ.

error: Content is protected !!

Join the Group

Join WhatsApp Group