ಸುಳ್ಯ: ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ಯೋಜನಾ ಕಛೇರಿಯಲ್ಲಿ ಜ್ಞಾನತಾಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, .9: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಇದರ ಆಯೋಜನೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಅಂತರ್ಜಾಲ ಶಿಕ್ಷಣ ವ್ಯವಸ್ಥೆ “ಜ್ಞಾನತಾಣ” ಕಾರ್ಯಕ್ರಮವು ಇಂದು ಸುಳ್ಯದ ಶ್ರೀ.ಕ್ಷೇ.ಧ. ಗ್ರಾಮಾಭಿವೃದ್ಧಿ ಯೋಜನಾ ಕಛೇರಿ ಸಭಾಂಗಣದಲ್ಲಿ ನಡೆಯಿತು.

 

ಕಾರ್ಯಕ್ರಮದ ಉದ್ಘಾಟನೆಯನ್ನು ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ನೆರವೇರಿಸಿದರು. ಅಧ್ಯಕ್ಷತೆಯನ್ನು ಸುಳ್ಯ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷರಾದ ಎನ್.ಎ.ರಾಮಚಂದ್ರ ವಹಿಸಿದ್ದರು. ಶಿಕ್ಷಣ ಸಂಯೋಜಕರಾದ ಚಂದ್ರಶೇಖರ, ಉಡುಪಿಯ ಶ್ರೀ.ಕ್ಷೇ.ಧ.ಗ್ರಾ.ಯೋಜನಾ ಕಛೇರಿಯ ಪ್ರಾದೇಶಿಕ ನಿರ್ದೇಶಕರಾದ ವಸಂತ ಸಾಲ್ಯಾನ್, ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ, ಸುಳ್ಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಯತೀಶ್ ರೈ ದುಗಲಡ್ಕ, ಸುಳ್ಯ ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ವಸಂತ ಏನೆಕಲ್ಲು ಉಪಸ್ಥಿತರಿದ್ದರು.

Also Read  ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ

 

 

error: Content is protected !!
Scroll to Top