ಪೆರ್ನೆಯ ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು ಹಣ ದೋಚಿದ ಪ್ರಕರಣ ➤ ಮೂವರು ಕಿಲಾಡಿ ಆರೋಪಿಗಳ ಅರೇಸ್ಟ್

(ನ್ಯೂಸ್ ಕಡಬ) newskadaba.com ಪೆರ್ನೆ . 10: ಅಡಿಕೆ ವರ್ತಕನಿಗೆ ಚೂರಿಯಿಂದ ತಿವಿದು ಲಕ್ಷಾಂತರ ರೂಪಾಯಿ ದೋಚಿದ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಈಗಾಗಲೇ ಉಪ್ಪಿನಂಗಡಿ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

 

ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕೋಟೆಕನಿ ಮಿತ್ತಪದವಿನ ಅಫ್ರೀದ್ (22), ಸೋಮವಾರ ಪೇಟೆಯ ದೊಡ್ಡಹನಕೊಡು ಗ್ರಾಮದ ಕಾಗಡಿಕಟ್ಟೆ ನಿವಾಸಿ ಜುರೈಝ್ (20) ಮತ್ತು ಬಂಟ್ವಾಳದ  ಬಡಗಬೆಲ್ಲೂರು ಗ್ರಾಮದ ಶಾಲೆ ಬಳಿ ನಿವಾಸಿ, ಹಾಲಿ ಕಡೆಶಿವಾಲಯ ದೊಡ್ಡಾಜೆಯಲ್ಲಿ ವಾಸವಿರುವ ಮೊಹಮ್ಮದ್ ತಂಝೀಲ್ (22) ಎಂದು ಗುರುತಿಸಲಾಗಿದೆ. ಇವರು ದರೋಡೆ ಕೃತ್ಯಕ್ಕೆ ಬಳಸಿದ  ದ್ವಿಚಕ್ರ ವಾಹನ, ಚೂರಿ, ಮೂರು ಮೊಬೈಲ್ ಹಾಗೂ ಸುಲಿಗೆ ಮಾಡಿದ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

Also Read  ರೈಲು ಹಳಿಯ ಮೇಲೆ ಕುಸಿದು ಬಿದ್ದ ಮಣ್ಣು - 2 ದಿನಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯ

 

ಪೆರ್ನೆಯಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದ ದೀಪಕ್ ಶೆಟ್ಟಿ ಎಂಬವರು ಅಕ್ಟೋಬರ್ 27 ರ ಸಂಜೆ ಅಂಗಡಿ ಮುಚ್ಚಿ ಅಡಿಕೆ ಮಾರಾಟದಿಂದ ಸಿಕ್ಕಿದ 3.50 ಲಕ್ಷ ರೂ.ಗಳೊಂದಿಗೆ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದಾಗ,  ಅಪರಿಚಿತರ ತಂಡ ದ್ವಿಚಕ್ರ ವಾಹನದಲ್ಲಿ ಬಂದು ದೀಪಕ್ ಅವರನ್ನು ತಡೆದು ಚೂರಿಯಿಂದ ಇರಿದು ಹಲ್ಲೆ ಮಾಡಿದ್ದಾರೆ.ಅವರ ಬಳಿ ಇದ್ದ ನಗದು ಮತ್ತು ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಅಪಹರಿಸಿ ಪರಾರಿಯಾಗಿದ್ದರು.ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆದರೂ ಆರೋಪಿಗಳ ಪತ್ತೆ ಮಾಡುವುದು ಉಪ್ಪಿನಂಗಡಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಸತತ ಕಾರ್ಯಾಚರಣೆ ಬಳಿಕ, ತಂಡಗಳನ್ನು ರಚಿಸಿ ಇದೀಗಾ ಮೂವರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Also Read  ಇಚ್ಲಂಪಾಡಿ: ನದಿಗೆ ಬಾಗಿನ ➤ ಸ್ವಚ್ಚತಾ ಕಾರ್ಯ

error: Content is protected !!
Scroll to Top