ರಾಮಕುಂಜೇಶ್ವರ ಪ್ರೌಢ ಶಾಲೆಯಲ್ಲಿ ಗಾಂಧಿಜಯಂತಿ ►ಅಹಿಂಸೆಯಿಂದ ಸಾಮಾಜಿಕ ಬದಲಾವಣೆ ಸಾಧ್ಯ – ಎಂ. ಸತೀಶ್ ಭಟ್ 

(ನ್ಯೂಸ್ ಕಡಬ) newskadaba.com ಕಡಬ,ಅ.4. ಸತ್ಯ ಧರ್ಮ ನ್ಯಾಯ ನೀತಿಯ ಪರಿಪಾಲನೆ ಮಾಡಿದ ಮಹಾತ್ಮ ಗಾಂಧೀಜಿಯ ಜೀವನ ಶೈಲಿಯನ್ನು ನಾವೆಲ್ಲ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ. ಸತೀಶ್ ಭಟ್  ತಿಳಿಸಿದರು.

ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ಮಾತನಾಡಿದ  ಪ್ರಾಂಶುಪಾಲ ಎಂ. ಸತೀಶ್ ಭಟ್  ಅವರು ಅಹಿಂಸೆಯಿಂದಲೇ ಸಾಮಾಜಿಕ ಬದಲಾವಣೆ ಸಾಧ್ಯ ಎಂದು ತೋರಿಸಿಕೊಟ್ಟ ಗಾಂಧೀಜಿ ನಮಗೆಲ್ಲ ಆದರ್ಶ ಎಂದರು.

Also Read  ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

ಪ್ರೌಢಶಾಲಾ ಮುಖ್ಯಗುರು ಸತೀಶ್ ಭಟ್ ಗಾಂಧಿ ಜಯಂತಿ ಆಚರಣೆಯ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಸಿದರು. ಪ್ರೌಢಶಾಲೆ ಮತ್ತು ಕಾಲೇಜಿನ ಭೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಶಾಲಾ ಸ್ವಚ್ಚತಾ ಕಾರ್ಯ ನಡೆಯಿತು.

error: Content is protected !!
Scroll to Top