ಕಡಬ: ನೂತನ ತಾ.ಪಂ. ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲು ಉಸ್ತುವಾರಿ ಸಚಿವರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ.12: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕು ಪಂಚಾಯತ್ ಗೆ ಅನುದಾನ ಬಿಡುಗಡೆಗೊಳಿಸುವಂತೆ ತಾ.ಪಂ. ಅಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ನ.10 ರಂದು ಕಡಬ ತಾ.ಪಂ. ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.

 

 

ಹೊಸದಾಗಿ ರಚನೆಗೊಂಡಿರುವ ಕಡಬ ತಾಲೂಕು ಪಂಚಾಯತ್ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಅನುದಾನದ ಕೊರತೆ ಇದ್ದು, ಕೂಡಲೇ 2 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಬೇಕೆಂದು ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರು ನ.10 ರಂದು ಮಂಗಳೂರಿಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಜಯಂತಿ ಆರ್. ಗೌಡ, ಸುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ವೈ ಕುಸುಮಾ ಅವರು ಉಪಸ್ಥಿತರಿದ್ದರು.

Also Read  ಕಡಬ ತಾಲೂಕು ಪಂಚಾಯತ್ ಅಧ್ಯಕ್ಷರಿಂದ ಶಾಲಾ ಭೇಟಿ ➤ ಸಮಸ್ಯೆಗಳ ಬಗ್ಗೆ ಪರಿಶೀಲನೆ

 

 

error: Content is protected !!
Scroll to Top