ಹಸಿರು ಪಟಾಕಿ ಮಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು.12: ಕೊರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಪಟಾಕಿಯನ್ನು ನಿಷೇದಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ರಾಜ್ಯಾದ್ಯಂತ ಇಂದಿನಿಂದ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

 

 

ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಸಿರು ಪಟಾಕಿ ಮಾರಾಟಕ್ಕೆ ಮಾರಾಟಗಾರರಿಗೆ ಲೈಸೆನ್ಸ್ ನೀಡಲು ಬಿಬಿಎಂಪಿ, ಪೊಲೀಸ್ ಇಲಾಖೆಗೆ ಅವಕಾಶ ನೀಡಿದೆ. ಇನ್ನು ಹಸಿರು ಪಟಾಕಿಯನ್ನನಷ್ಟೆ ಮಾರಾಟ ಮಾಡಬೇಕು. ಹಾಗೇಯೆ 5 ದಿನ ಪಟಾಕಿ ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಲಾಗಿದೆ ಎಂಬುದಾಗಿ ಸರ್ಕಾರ ಆದೇಶಿಸಿದೆ. ಹಸಿರು ಪಟಾಕಿ ಮಾರಾಟ ಮಾಡುವಾಗ, ಖರೀದಿಸುವಾಗ ಕೊರೋನಾ ಮುಂಜಾಗೃತ ಕ್ರಮಗಳನ್ನು ಅನುಸರಿಸಬೇಕು. ಪಟಾಕಿಯ ಬಾಕ್ಸ್ ಮೇಲೆ ಕಡ್ಡಾಯವಾಗಿ ಗ್ರೀನ್ ಫೈರ್ ಬಾಕ್ಸ್ ಎಂಬುದಾಗಿ ಮುದ್ರೆಯಿರಬೇಕು ಎಂಬುದಾಗಿ ತಿಳಿಸಿದೆ. ಈ ಮೂಲಕ ಇಂದಿನಿಂದ ರಾಜ್ಯದಲ್ಲಿ ಹಸಿರು ಪಟಾಕಿ ಮಾರಾಟಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

Also Read  ಆಯುಷ್ ನೂತನ ಯೋಜನೆಗಳಿಗೆ ಚಾಲನೆ

 

error: Content is protected !!
Scroll to Top