(ನ್ಯೂಸ್ ಕಡಬ) newskadaba.com ಕಡಬ,ಅ.4. ನೂಜಿಬಾಳ್ತಿಲ ಗ್ರಾಮದ ಅಡೆಂಜ ಶ್ರೀಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ವಿಶೇಷ ಪೂಜೆ, ಆಯುಧ ಪೂಜೆಯು ವಿಜೃಂಭಣೆಯಿಂದ ನಡೆಯಿತು.
ನವರಾತ್ರಿ ಅಂಗವಾಗಿ ಪ್ರತಿದಿನ ರಾತ್ರಿ ದೇವರ ಸನ್ನಿಧಿಯಲ್ಲಿ ಭಜನಾ ಕಾರ್ಯಕ್ರಮ, ಶ್ರೀದುರ್ಗಾಪೂಜೆ, ಶ್ರೀದೇವಿಗೆ ಪಂಚಾಮೃತ ಅಭಿಷೇಕ, ಮತ್ತು ಅಲಂಕಾರ,ಅರ್ಚನೆ ಹೂವಿನ ಪೂಜೆ ವಿಶೇಷ ಸೇವೆಗಳು ನಡೆದು ದೇವರಿಗೆ ನೈವೇದ್ಯ ಸಮರ್ಪಣೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿತರಣೆ ನಡೆದವು.
ವಿಶೇಷವಾಗಿ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಸಲಾಯಿತು. ಆಯುಧ ಪೂಜೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ನಾರಾಯಣ ಅಭ್ಯಾಂಕರ್ ಧಾರ್ಮಿಕ ವಿಧಿವಿಧಾನವನ್ನು ನೆರವೇರಿಸಿದರು. ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು, ಆಡಳಿತ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಎಸ್, ಹಾಗೂ ಜೀರ್ಣೋದ್ಧಾರ ಸಮಿತಿ, ಮತ್ತು ಭಜನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಭಕ್ತಾಧಿಗಳು ಭಾಗವಹಿಸಿದ್ದರು.