ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ► ನೂಜಿಬಾಳ್ತಿಲ ಬೆಥನಿ ಕಾಲೇಜಿನಲ್ಲಿ ವಾರ್ಷಿಕ ವಿಶೇಷ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ,ಅ.4. ದೇವರು ನಮ್ಮನ್ನು ಮನುಷ್ಯರನ್ನಾಗಿ ಈ ಲೋಕದಲ್ಲಿ ಸೃಷ್ಟಿಸಿದ್ದು ನಾವು ಉತ್ತಮ ಶಿಕ್ಷಣ ಪಡೆಯುವುದರೊಂದಿಗೆ ಸಾಮಾಜಿಕ ವಿಚಾರಧಾರೆಗಳನ್ನು ಅರಿತುಕೊಂಡು ಸಮಾಜದಲ್ಲಿ ಪ್ರೀತಿ, ವಿಶ್ವಾಸದಿಂದ ಶಾಂತಿ ಸೌಹಾರ್ದತೆಯಿಂದ ಬದುಕಬೇಕು ಎಂದು ಪುತ್ತೂರು ಧರ್ಮಪ್ರಾಂತ್ಯ ನೂತನ ಧರ್ಮಾಧ್ಯಕ್ಷ ಡಾ. ಗೀವರ್ಗೀಸ್ ಮಾರ್ ಮಕಾರಿಯೋಸ್ ಹೇಳಿದರು.


ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಒಂದು ವಾರಗಳ ನಡೆಯುವ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಎಲ್ಲರ ಒಳಿತನ್ನು ಬಯಸಿ ಜೀವನ ಮಾಡುವುದೆ ನಿಜವಾದ ಧರ್ಮ. ಅಹಿಂಸಾತ್ಮಕ ನಿಲವಿನೊಂದಿಗೆ ಸತ್ಕರ್ಮಗಳನ್ನು ಮಾಡುವಲ್ಲಿ ನಾವು ಚಿಂತಿಸಬೇಕು. ವಿದ್ಯಾರ್ಥಿ ದಿಸೆಯಲ್ಲಿ ಸಂಘಟನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಂಡಾಗ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಬಹುದು ಎಂದರು.
ಕುಕ್ಕೇ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಬಾಲಕೃಷ್ಣ ಗೌಡ ಬಳ್ಳೇರಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಧ್ವಜಾರೋಹಣ ನೆರವೇರಿಸಿದರು.
ಬೆಥನಿ ಜೀವನ್ಜ್ಯೋತಿ ಪ್ರೋವಿನಿಯಲ್ಸ್‌ ವೆ| ರೆ| ಫಾ| ವಿಲಿಯಂ ನೆಡುಂಬುರತ್ ಒಐಸಿ ಅಧ್ಯಕ್ಷತೆ ವಹಿಸಿದ್ದರು.

Also Read  ಡ್ರೈನೇಜ್ ನಲ್ಲಿ ಮಡಚಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ


ಬೆಥನಿ ಸಂ.ಪ.ಪೂ.ಕಾಲೇಜಿನ ಅಂಚಾಲಕ ರೆ| ಫಾ| ಸತ್ಯನ್ ಥೋಮಸ್ ಒಐಸಿ, ರೆಂಜಿಲಾಡಿ ಬೀಡಿನ ಯಶೋಧರ ಯಾನೆ ತಮ್ಮಯ್ಯ ಬಲ್ಲಾಳ್, ನೂಜಿಬಾಳ್ತಿಲ ಗ್ರಾ.ಪಂ. ಅಧ್ಯಕ್ಷ ಸದಾನಂದ ಗೌಡ ಸಾಂತ್ಯಡ್ಕ, ತಾಲೂಕು ಪಂಚಾಯತಿ ಸದಸ್ಯ ಗಣೇಶ್ ಕೈಕುರೆ, ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ವಸಂತ ಗೌಡ ಮಾರಪ್ಪೆ ಮಾತನಾಡಿ ಶುಭಹಾರೈಸಿದರು.
ಶಿಬಿರಾಧಿಕಾರಿ ವಾಸುದೇವ ಗೌಡ ಕೋಲ್ಪೆ ಪ್ರಸ್ತಾವಿಸಿದರು. ಬೆಥನಿ ಸಂ. ಪ.ಪೂ. ಕಾಲೇಜಿನ ಪ್ರಾಂಶುಪಾಲ ಜಾರ್ಜ್ ಟಿ.ಎಸ್. ಸ್ವಾಗತಿಸಿದರು. ಕಡಬ ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಚೆರಿಯನ್ ಬೇಬಿ ವಂದಿಸಿದರು. ಬೆಥನಿ ಕಾಲೇಜಿನ ಉಪನ್ಯಾಶಕ ಜೋಸೆಫ್ ಟಿ.ಜೆ. ಕಾರ್ಯಕ್ರಮ ನಿರೂಪಿಸಿದರು.

error: Content is protected !!
Scroll to Top