(ನ್ಯೂಸ್ ಕಡಬ) newskadaba.com ನವದೆಹಲಿ ನ. 13: ಶೀಘ್ರದಲ್ಲಿಯೇ ಪಬ್‍ಜಿ ಮೊಬೈಲ್ ಗೇಮ್ ಭಾರತಕ್ಕೆ ಹೊಸ ಅವತಾರದಲ್ಲಿ ಎಂಟ್ರಿ ನೀಡಲಿದೆ ಎಂದು ಸೌಥ್ ಕೊರಿಯನ್ ಪಬ್‍ಜಿ ಕಾರ್ಪೋರೇಷನ್ ಇಂದು ಘೋಷಣೆ ಮಾಡಿದೆ.ಕೇವಲ ಭಾರತದ ಮಾರುಕಟ್ಟೆಗಾಗಿ ಪಬ್‍ಜಿ ಗೇಮ್ ಹೊಸ ಸ್ವರೂಪದಲ್ಲಿ ಬರಲಿದೆ ಎಂದು ಕಂಪನಿ ತನ್ನ ಘೋಷಣೆಯಲ್ಲಿ ಹೇಳಿದೆ.
ಜೊತೆಗೆ ಇದರಲ್ಲಿ ಚೀನಾದ ಪಾಲುದಾರಿಕೆ ಇರಲ್ಲ ಎಂದು ಸ್ಪಷ್ಟನೆ ನೀಡಿದೆ.ಪಬ್‍ಜಿ ಕಾರ್ಪೋರೇಷನ್ ನ ಪೇರೆಂಟ್ ಕಂಪನಿ ಕ್ರ್ಯಾಫ್ಟನ್ ಇಂಕ್ ಭಾರತದಲ್ಲಿ 100 ಮಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಮಾಡುವುದಾಗಿ ಸಹ ಘೋಷಿಸಿದೆ. ಕೊರಿಯನ್ ಕಂಪನಿಯೊಂದು ಮೊದಲ ಬಾರಿಗೆ ಭಾರತದಲ್ಲಿ ಇಷ್ಟು ದೊಡ್ಡ ಮೊತ್ತವನ್ನ ಹೂಡಿಕೆ ಮಾಡ್ತಿದೆ ಎಂದು ಹೇಳಿದೆ.ಕೇಂದ್ರ ಸರ್ಕಾರ ಸೈಬರ್ ಸೆಕ್ಯೂರಿಟಿ ಮತ್ತು ದೇಶದ ಹಿತದ ಹಿನ್ನೆಲೆ ಪಬ್‍ಜಿ ಸೇರಿದಂತೆ ಚೀನಾ ಅ್ಯಪ್ ಗಳನ್ನು ಬ್ಯಾನ್ ಮಾಡಿತ್ತು. ಇದೀಗ ಕೊರಿಯನ್ ಕಂಪನಿ ಭಾರತಕ್ಕಾಗಿ ಹೊಸ ರೂಪದಲ್ಲಿ ಭದ್ರತೆಗೆ ಧಕ್ಕೆಯಾಗದ ರೀತಿಯಲ್ಲಿ ಪಬ್‍ಜಿ ಗೇಮ್ ಲಾಂಚ್ ಮಾಡಲು ಸಿದ್ಧತೆ ನಡೆಸಿದೆ. ಭಾರತಕ್ಕೆ ಪಬ್‍ಜಿ ಮೊಬೈಲ್ ಇಂಡಿಯಾ ಹೆಸರಿನಲ್ಲಿ ಹಿಂದಿರುಗಲಿದೆ.
ಆದ್ರೆ ಲಾಂಚ್ ಆಗುವ ದಿನವನ್ನ ಕಂಪನಿ ಘೋಷಣೆ ಮಾಡಿಲ್ಲ. ಭಾರತೀಯ ಖಾಸಗಿತನಕ್ಕೆ ಆ್ಯಪ್ ನಿಂದ ಧಕ್ಕೆ ಆಗಲಾರದು ಎಂದು ಪಬ್‍ಜಿ ಸ್ಪಷ್ಟಪಡಿಸಿದೆ. ವಿಶ್ವದಲ್ಲಿ ಅತಿ ಹೆಚ್ಚು ಡೌನ್‍ಲೋಡ್ ಅಗಿರುವ ಟಾಪ್ 5ರ ಲಿಸ್ಟ್ ನಲ್ಲಿ ಪಬ್‍ಜಿ ಸ್ಥಾನ ಹೊಂದಿದೆ.ಭಾರತೀಯನಿರುತ್ತಾನೆ.