ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ವಿರೋಧ ➤ ಕಾಂಗ್ರೆಸ್ ನಿಂದ ವಾರಕ್ಕೊಂದು ಪ್ರತಿಭಟನೆಯ ನಿರ್ಧಾರ

(ನ್ಯೂಸ್ ಕಡಬ) newskadaba.com ಮಂಗಳೂರು . 14: ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸ್ಥಳೀಯ ಕಾಂಗ್ರೆಸ್ ಮುಖಂಡರು, ವಾರಕ್ಕೊಂದು ಪ್ರತಿಭಟನೆ ಆಯೋಜಿಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ .ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಗ್ರೂಪ್ ಗೆ ಹಸ್ತಾಂತರಿಸಿದ ಹಲವು ದಿನಗಳ ಬಳಿಕ, ಕಾಂಗ್ರೆಸ್ ಮುಖಂಡರು ಎಚ್ಚೆತ್ತುಕೊಂಡಿದ್ದಾರೆ. ಇದೀಗ ಮಾಜಿ ಶಾಸಕ ಅಭಯಚಂದ್ರ ಜೈನ್ ವಿಮಾನ ನಿಲ್ದಾಣ ನಿರ್ವಹಣೆ ಖಾಸಗೀಕರಣಗೊಳಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

“ಪ್ರಧಾನಿ  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಾಮಾನ್ಯ ಜನತೆಗೆ ತೊಂದರೆ ನೀಡುತ್ತಿದೆ ಎಂಬುದು ಇಡೀ ದೇಶಕ್ಕೆ ಗೊತ್ತಾಗಬೇಕು. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಅದಾನಿ ಸಂಸ್ಥೆಗೆ ನೀಡಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ವಾರಕ್ಕೊಂದು ಪ್ರತಿಭಟನೆ ನಡೆಸಲಾಗುವುದು” ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಯಚಂದ್ರ ಜೈನ್ ತಿಳಿಸಿದ್ದಾರೆ.

Also Read  ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಎನ್​ಕೌಂಟರ್ ➤ ಓರ್ವ ಯೋಧ ಹುತಾತ್ಮ

 

Xl

 

 

error: Content is protected !!
Scroll to Top