ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ–ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು . 14: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್‍ರು ಮತ್ತು ಪಾರ್ಸಿ ಜನಾಂಗದವರಿಂದ ಪ್ರಸ್ತುತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

 

 

ಅರ್ಜಿಯನ್ನು ಆನ್‍ಲೈನ್ನಲ್ಲಿ kmdc.kar.nic.in/loan ಸಲ್ಲಿಸಲು ಡಿಸೆಂಬರ್ 10 ಮತ್ತು ದಾಖಲಾತಿಗಳೊಂದಿಗೆ ಅರ್ಜಿಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನವಾಗಿರುತ್ತದೆ. ನಿಗಮದ ಎಲ್ಲಾ ಯೋಜನೆಗಳಲ್ಲಿ ಅಂಗವಿಕಲರಿಗೆ ಹಾಗೂ ಮಾಜಿ ಸೈನಿಕರಿಗೆ ಮೀಸಲಾತಿ ಇರುತ್ತದೆ. ಅರ್ಜಿದಾರರು ಆನ್ ಲೈನ್ ಅರ್ಜಿಯ ಹಾರ್ಡ್ ಕಾಪಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), “ಮೌಲಾನಾ ಆಝಾದ್ ಭವನ” 2ನೇ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ದ.ಕ ಜಿಲ್ಲೆ, ಮಂಗಳೂರು ಕಛೇರಿಗೆ ಸಲ್ಲಿಸಬೇಕು ಎಂದು ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕೋವಿಡ್-19 ನಿಂದ ಕುವೈತ್ ನಲ್ಲಿ ಮೃತಪಟ್ಟ ಕಾರವಾರದ ವ್ಯಕ್ತಿ

 

 

 

error: Content is protected !!
Scroll to Top