ಸಾಲ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  (ಕರ್ನಾಟಕ ವಾರ್ತೆ) . 14: ಅಲ್ಪಸಂಖ್ಯಾತ ಸಮುದಾಯ ನಿಗಮದಿಂದ ಕೋವಿಡ್‍ನಿಂದ ಆರ್ಥಿಕ ತೊಂದರೆ ಅನುಭವಿಸುತ್ತಿರುವ ಅಲ್ಪಸಂಖ್ಯಾತ ಮಹಿಳೆಯರಿಂದ ನಿಗಮದ ವೆಬ್‍ಸೈಟ್ (kmdcmicro.karnataka.gov.in) ಮೂಲಕ ಅರ್ಜಿಆಹ್ವಾನಿಸಲಾಗಿದೆ.

 

ಯಾವುದೇ ಯೋಜನೆಯಲ್ಲೂ ಇದುವರೆಗೆ ಸಾಲ, ಸಹಾಯಧನ ಪಡೆಯದ ಕೋವಿಡ್-19ರ ಪಿಡುಗಿನಿಂದಾಗಿ ತೊಂದರೆಗೊಳಗಾದ ಅಂತ್ಯೋದಯ/ಬಿಪಿಎಲ್‍ಕಾರ್ಡ್ ಹೊಂದಿರುವ 25 ರಿಂದ 50 ವಯೋಮಾನದೊಳಗಿನ ಮಹಿಳೆಯರಿಗೆ ತಳ್ಳುವ ಗಾಡಿಯಲ್ಲಿ ವ್ಯಾಪಾರ, ಬೀದಿ ವ್ಯಾಪಾರ, ಜಾತ್ರೆಗಳಲ್ಲಿ ವ್ಯಾಪಾರ, ಕಿರಾಣಿಅಂಗಡಿ, ಅರಿಷಿನ/ಕುಂಕುಮ/ ಅಗರಬತ್ತಿ/ಕರ್ಪೂರ, ಪಾದಚಾರಿ ಮಾರ್ಗದಲ್ಲಿ ಟೀ/ಕಾಫಿ ಮಾರಾಟ, ಎಳನೀರು ವ್ಯಾಪಾರ, ಹೂವಿನ ವ್ಯಾಪಾರ, ತರಕಾರಿ ವ್ಯಾಪಾರ, ಹಣ್ಣಿನ ವ್ಯಾಪಾರ, ಇನ್ನಿತರ ಸಣ್ಣ ವ್ಯಾಪಾರ ನಡೆಸಲು ಆರಂಭಿಕ ಬಂಡವಾಳಕ್ಕಾಗಿ ರೂ.10,000/- ಮೊತ್ತದಅಲ್ಪಾವಧಿ ಸಾಲ ನೀಡಲಾಗುತ್ತದೆ ಎಂದು ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ನಟ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ➤ ಅಭಿಮಾನಿಗಳ ಆಕ್ರೋಶ

 

 

error: Content is protected !!
Scroll to Top