ಎಸ್.ಸಿ.ಡಿ.ಸಿ.ಸಿ ಅಧ್ಯಕ್ಷ ರಾಜೇಂದ್ರ ಅವರಿಗೆ ಬಿಜೆಪಿ ಸೇರಲು ಮತ್ತೊಮ್ಮೆ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಗ್ರಾಮ ಪಂಚಾಯತ್ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿಕೊಳ್ಳುವಂತೆ ದ.ಕ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಆಹ್ವಾನ ನೀಡಲಾಗಿದೆ.

Xl

ಮಂಗಳೂರಿನಲ್ಲಿ ನಡೆದ 67 ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಪಕ್ಷಕ್ಕೆ ಸೇರುವಂತೆ ರಾಜೇಂದ್ರ ಕುಮಾರ್ ಅವರಿಗೆ ಆಹ್ವಾನವನ್ನು ನೀಡಿದರು. ಅಲ್ಲದೇ ಸಹಕಾರಿ ಕ್ಷೇತ್ರದಲ್ಲಿ ಹೆಚ್ಚಿನ ಎತ್ತರದ ಸ್ಥಾನ ಪಡೆಯಲು ಇದು ರಹದಾರಿಯಾಗಲಿದೆ ಎಂದರು. ಪ್ರಸ್ತುತ ಕರ್ನಾಟಕ ರಾಜ್ಯ ಸಹಕಾರ ಒಕ್ಕೂಟದ ಅಧ್ಯಕ್ಷರೂ ಆಗಿರುವ ಇವರು, ಕಾಂಗ್ರೆಸ್ ಸದಸ್ಯರಾಗಿದ್ದಾರೆ ಮತ್ತು 2019 ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸ್ಥಾನದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಳೆದ 27 ವರ್ಷಗಳಿಂದ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕ್‌ನ ಅಧ್ಯಕ್ಷರಾಗಿ ಸತತವಾಗಿ ಆಯ್ಕೆಯಾಗುವ ಮೂಲಕ ಅವರು ದಾಖಲೆ ನಿರ್ಮಿಸಿದ್ದಾರೆ.

Also Read  ಬಂಟ್ವಾಳ: ಅಕ್ರಮ ಮರಳು ಅಡ್ಡೆಗೆ ದಾಳಿ ► 48 ಬೋಟ್ ಗಳು ಸೇರಿ 60 ಲಕ್ಷ ರೂ‌. ಮೌಲ್ಯದ ಸ್ವತ್ತು ವಶ

error: Content is protected !!
Scroll to Top