ಉಡುಪಿ: ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಘಟಕದ ಸಭಾಪತಿಯಾಗಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 16.  ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ನೂತನ ಸಭಾಪತಿಯಾಗಿ ಉದ್ಯಮಿ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ಸಂಸ್ಥೆಯ ಅಧ್ಯಕ್ಷ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಅಜ್ಜರಕಾಡು ರೆಡ್‌ ಕ್ರಾಸ್ ಭವನದಲ್ಲಿ ನಡೆದ ಸಭೆಯಲ್ಲಿ, ಬಸ್ರುರು ರಾಜೀವ್ ಶೆಟ್ಟಿ ವಿರುದ್ಧದ ಅವಿಶ್ವಾಸ ಗೊತ್ತುವಳಿ 6-4ರ ಮತಗಳ ಅಂತರದಿಂದ ವಿಜಯ ಸಾಧಿಸಿತು. ಈ ಮೂಲಕ ಬಸ್ರೂರು ರಾಜೀವ ಶೆಟ್ಟಿ ಅವರನ್ನು ಸಭಾಪತಿ ಸ್ಥಾನದಿಂದ ತೆಗೆಯಲಾಯಿತು. ನಂತರ ಸಭಾಪತಿ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾಗಿರುವ ಉಡುಪಿ ಜಿಪಂ ಸಿಇಓ ಡಾ.ನವೀನ್ ಭಟ್ ಅವರು ಉಪಸ್ಥಿತರಿದ್ದರು.

Also Read  ಅರಂತೋಡು: "ಪ್ರತಿದಿನ ಸ್ವಚ್ಛತೆ ಕಡೆ ಹತ್ತು ಹೆಜ್ಜೆಗಳು" ಎಂಬ ಧ್ಯೇಯ ವಾಕ್ಯದೊಂದಿಗೆ ಹೆದ್ದಾರಿ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

error: Content is protected !!
Scroll to Top