ಯುವತಿಯರನ್ನು ಚುಡಾಯಿಸುತ್ತಿದ್ದ 10 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಡಿಕೇರಿ, ನ. 16. ಕೇರಳದ ಯುವಕರ ಗುಂಪೊಂದು ಯುವತಿಯರನ್ನು ಚುಡಾಯಿಸುತ್ತಿದ್ದು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ ಘಟನೆ ತಲಕಾವೇರಿ ಕ್ಷೇತ್ರದ ಬಳಿ ನಡೆದಿದೆ.

ಪ್ರವಾಸಕ್ಕೆಂದು ಬಂದಿದ್ದ ಯುವಕರನ್ನು ಮಾಸ್ಕ್‌ ಧರಿಸುವಂತೆ ಸಲಹೆ ನೀಡಿದ ಬಿ.ಎಸ್‌.ತಿಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ, ಪ್ರಶ್ನೆಗೆ ಮುಂದಾದ ವ್ಯಕ್ತಿಯೊಬ್ಬರ ಕೈ ಬೆರಳನ್ನು ಮುರಿದಿದ್ದಾರೆ ಎಂದು ತಿಳಿದು ಬಂದಿದೆ. ಇವರು ಯುವತಿಯರನ್ನು ಚುಡಾಯಿಸುತ್ತಿದ್ದು, ಈ ಬಗ್ಗೆ ಕ್ಷೇತ್ರದ ಸೆಕ್ಯುರಿಟಿ ಗಾರ್ಡ್‌ ಎಚ್ಚರಿಕೆ ನೀಡಿದಾಗ ಅವರ ಮೇಲೂ ಕುಪಿತರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು 10 ಯುವಕರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು  ಬಂದಿದೆ.

Also Read  ಜಿ.ಟಿ.ಟಿ.ಸಿ ಡಿಪ್ಲೋಮಾ ಕೋರ್ಸ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 

error: Content is protected !!
Scroll to Top